ಜನರ ತೀವ್ರ ಪ್ರತಿಭಟನೆ ಹಿನ್ನೆಲೆ AIR ಧಾರವಾಡ ಘಟಕ ಸ್ಥಳಾಂತರ ಆದೇಶ ರದ್ದು

ಧಾರವಾಡ: ಆಕಾಶವಾಣಿ (AIR) ಪ್ರಾದೇಶಿಕ ಸುದ್ದಿ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಕೇಂದ್ರದ ನಿರ್ಧಾರಕ್ಕೆ ವಿರುದ್ಧವಾಗಿ ಉತ್ತರ ಕರ್ನಾಟಕದಲ್ಲಿ  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರಸಾರ ಭಾರತಿ ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ. ಏಪ್ರಿಲ್ 17ರಂದು ಹೊರಡಿಸಿದ್ದ ಸ್ಥಳಾಂತರ ಆದೇಶವನ್ನು ಏಪ್ರಿಲ್ 22ರಂದು ತಕ್ಷಣದಿಂದಲೇ ರದ್ದುಗೊಳಿಸಲಾಗಿದೆ.ಈ ನಿರ್ಧಾರಕ್ಕೆ ವಿರೋಧವಾಗಿ ಸಾಹಿತ್ಯಿಗಳು, ಸಂಘಟನೆಗಳು ಮತ್ತು ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ ಕರ್ನಾಟಕ SSLC ಫಲಿತಾಂಶ 2026: ಶೇ. 94.1ರಷ್ಟು ದಾಖಲೆ ಪ್ರಮಾಣದ ತೇರ್ಗಡೆ; ಏಳು ವಿದ್ಯಾರ್ಥಿಗಳಿಗೆ 625ಕ್ಕೆ 625

ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ವಿಷಯವನ್ನು ವಿವರಿಸಿದ ನಂತರ, ಸರ್ಕಾರ ಈ ತೀರ್ಮಾನವನ್ನು ಹಿಂತೆಗೆದುಕೊಂಡಿದೆ.
ಧಾರವಾಡ AIR ಸುದ್ದಿ ಘಟಕವು ಸುಮಾರು 45 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜನರಿಗೆ ಪ್ರಾದೇಶಿಕ ಸುದ್ದಿಗಳನ್ನು ನೀಡುವ ಪ್ರಮುಖ ಕೇಂದ್ರವಾಗಿದೆ. ಇದನ್ನು ಬೆಂಗಳೂರಿಗೆ ಸ್ಥಳಾಂತರಿಸಿದರೆ ಸ್ಥಳೀಯ ವಿಷಯಗಳಿಗೆ ಅನ್ಯಾಯವಾಗುತ್ತದೆ ಎಂಬ ಆತಂಕ ವ್ಯಕ್ತವಾಗಿತ್ತು.

ರಾಜ್ಯದ ಸುದ್ಧಿ  ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು