ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ “ಭಯೋತ್ಪಾದಕ” ಎಂಬ ಹೇಳಿಕೆಯು ದೇಶದ ಜನಾದೇಶಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.
“ಜನರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ದೇಶದ ಪ್ರಧಾನಮಂತ್ರಿಯನ್ನು ಕೀಳುಮಟ್ಟದ ಶಬ್ದಗಳಿಂದ ನಿಂದಿಸುವುದು ಇಡೀ ದೇಶದ ಪ್ರಜೆಗಳಿಗೆ ಮಾಡಿದ ಅಪಚಾರ” ಎಂದು ಚೌಟ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಖರ್ಗೆ ಅವರಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡುವುದು ಕಾಂಗ್ರೆಸ್ ಪಕ್ಷದ ಬೌದ್ಧಿಕ ಅಧಃಪತನ ಮತ್ತು ಸಂಕುಚಿತ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
“ಅಭಿವೃದ್ಧಿ ರಾಜಕಾರಣದ ಮುಂದೆ ಸೋಲೊಪ್ಪಿಕೊಂಡಿರುವ ಕಾಂಗ್ರೆಸ್, ರಾಜಕೀಯ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದೆ. ಈ ಹತಾಶೆಯಿಂದಲೇ ಪ್ರಧಾನಿಯವರ ಮೇಲೆ ವೈಯಕ್ತಿಕ ದಾಳಿ ನಡೆಸುವ ಮೂಲಕ ವಿಕೃತ ಮನಸ್ಥಿತಿ ಪ್ರದರ್ಶಿಸುತ್ತಿದೆ” ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪುತ್ತೂರು: ಲವ್ ಮಾಡಿ ಮಗು ಕರುಣಿಸಿದ ಪ್ರಕರಣ: ಸಂತ್ರಸ್ತೆಯನ್ನು ವಿವಾಹವಾಗಲು ಕೃಷ್ಣನಿಗೆ ಹೈಕೋರ್ಟ್ ಸೂಚನೆ
ಕಾಂಗ್ರೆಸ್ ಹೆಣೆದಿದ್ದ ಸುಳ್ಳಿನ ಜಾಲವನ್ನು ಪ್ರಧಾನಿ ಮೋದಿ ಬಯಲಿಗೆಳೆದಿದ್ದಾರೆ. ಅದನ್ನು ಸಹಿಸಲಾಗದೆ ಜನರ ದಿಕ್ಕು ತಪ್ಪಿಸಲು ಕಾಂಗ್ರೆಸ್ ಇಂತಹ ಶಬ್ದಗಳನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

