SSLC ಫಲಿತಾಂಶ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ 97%, ಶಾಲೆಗೆ ಪ್ರಗತಿ ಟಾಪರ್

SSLC Result 2026

ಬಂಟ್ವಾಳ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ (ಕನ್ನಡ ಮಾಧ್ಯಮ)ಯು ಶೇ.97 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 272 ವಿದ್ಯಾರ್ಥಿಗಳಲ್ಲಿ 263 ಮಂದಿ ತೇರ್ಗಡೆ ಹೊಂದುವ ಮೂಲಕ ಈ ಫಲಿತಾಂಶ ದಾಖಲಿಸಿದೆ.

ವಿದ್ಯಾರ್ಥಿನಿ ಪ್ರಗತಿ 625ರಲ್ಲಿ 597 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವಿಶೇಷವಾಗಿ 28 ವಿದ್ಯಾರ್ಥಿಗಳು ಸಂಸ್ಕೃತ ವಿಷಯದಲ್ಲಿ 125ರಲ್ಲಿ 125 ಅಂಕಗಳನ್ನು  ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ರೀತಿ ತೃತೀಯ ಕನ್ನಡದಲ್ಲಿ 6 ಮಂದಿ ಹಾಗೂ ಹಿಂದಿಯಲ್ಲಿ 7 ಮಂದಿ ವಿದ್ಯಾರ್ಥಿಗಳು 100ರಲ್ಲಿ 100 ಅಂಕಗಳನ್ನು ಗಳಿಸಿದ್ದಾರೆ.

Advertisement

ಇದನ್ನೂ ಓದಿ: ಕರ್ನಾಟಕ SSLC ಫಲಿತಾಂಶ 2026: ಶೇ. 94.1ರಷ್ಟು ದಾಖಲೆ ಪ್ರಮಾಣದ ತೇರ್ಗಡೆ; ಏಳು ವಿದ್ಯಾರ್ಥಿಗಳಿಗೆ 625ಕ್ಕೆ 625

ಫಲಿತಾಂಶದಲ್ಲಿ 61 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 148 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು