ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ಕೈಬಿಟ್ಟಿದ್ದ ಪುತ್ತೂರಿನ ಮಾಜಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಅವರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ತನ್ನ ಮೇಲಿನ ಎಫ್‌ಐಆರ್ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆಯಾದರೂ ಅತ್ಯಂತ ಕಠಿಣ ಷರತ್ತುಗಳನ್ನು ವಿಧಿಸಿದೆ.
ಆರೋಪಿಯ ಸಂಪರ್ಕದಿಂದಾಗಿ ಯುವತಿಗೆ ಈಗಾಗಲೇ ಮಗುವಾಗಿದೆ. ಆ 10 ತಿಂಗಳ ಮಗು ಮತ್ತು ತಾಯಿಯನ್ನು ಅನಾಥರನ್ನಾಗಿ ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಹೀಗಾಗಿ ಮುಂದಿನ ಆದೇಶದವರೆಗೆ ಪ್ರತಿ ತಿಂಗಳು 75,000 ರೂಪಾಯಿಗಳನ್ನು ಸಂತ್ರಸ್ತ ಯುವತಿ ಮತ್ತು ಮಗುವಿನ ಜೀವನೋಪಾಯಕ್ಕಾಗಿ ಪಾವತಿಸಬೇಕು ಎಂದು ಕೃಷ್ಣ ಜೆ. ರಾವ್ ಅವರಿಗೆ ಸೂಚಿಸಿದೆ.

ಇದನ್ನೂ ಓದಿ: ಪುತ್ತೂರು: ಲವ್ ಮಾಡಿ ಮಗು ಕರುಣಿಸಿದ ಪ್ರಕರಣ: ಸಂತ್ರಸ್ತೆಯನ್ನು ವಿವಾಹವಾಗಲು ಕೃಷ್ಣನಿಗೆ ಹೈಕೋರ್ಟ್ ಸೂಚನೆ
ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ, ಸಂತ್ರಸ್ತೆ ಅಥವಾ ಆಕೆಯ ಸಂಬಂಧಿಕರು ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಎಂದು ಹೈಕೋರ್ಟ್ ತಿಳಿಸಿದೆ. ಆರೋಪಿ ಕೃಷ್ಣ ಜೆ. ರಾವ್ ಯುವತಿಗೆ ಮದುವೆಯ ಭರವಸೆ ನೀಡಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಮಗು ಹುಟ್ಟಿದ ನಂತರ ಆಕೆಯನ್ನು ನಿರ್ಲಕ್ಷಿಸಿದ್ದರಿಂದ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವು ಕರಾವಳಿ ಭಾಗದಲ್ಲಿ ರಾಜಕೀಯವಾಗಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

