HPV: ಕ್ಯಾನ್ಸರ್ ಅಪಾಯವನ್ನು ಸುಮಾರು ಅರ್ಧಕ್ಕಿಂತಲೂ ಕಡಿಮೆ ಮಾಡುತ್ತದೆ ಈ ಲಸಿಕೆ

hpv vaccination

ಮಾನವ ಪ್ಯಾಪಿಲೋಮಾ ವೈರಸ್ (HPV) ವಿರುದ್ಧದ ಲಸಿಕೆ ಪುರುಷರಲ್ಲಿ ಕ್ಯಾನ್ಸರ್ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂಬ ಮಹತ್ವದ ಮಾಹಿತಿ ಹೊಸ ಅಧ್ಯಯನದಲ್ಲಿ ಬಹಿರಂಗವಾಗಿದೆ. ಈ ಲಸಿಕೆ ಕ್ಯಾನ್ಸರ್ ಅಪಾಯವನ್ನು ಸುಮಾರು ಅರ್ಧಕ್ಕಿಂತಲೂ ಕಡಿಮೆ ಮಾಡುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಮೊದಲು ಮಹಿಳೆಯರಲ್ಲಿ ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಲು ಪರಿಚಯಿಸಲಾದ HPV ಲಸಿಕೆ, ಈಗ ಪುರುಷರಲ್ಲಿಯೂ ಪರಿಣಾಮಕಾರಿ ರಕ್ಷಣೆಯನ್ನು ಒದಗಿಸುತ್ತದೆ ಎಂಬುದು ಅಧ್ಯಯನದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಹಾರ್ಟ್ ಅಟ್ಯಾಕ್ ಸುನಾಮಿ: ಒಂದೇ ವರ್ಷದಲ್ಲಿ ಪ್ರಕರಣಗಳು ಶೇ. 120ರಷ್ಟು ಏರಿಕೆ; 7,212ಕ್ಕೆ ತಲುಪಿದ ಸಂಖ್ಯೆ!

ವಿಶೇಷವಾಗಿ ಕಂಠ ಭಾಗ ಹಾಗೂ ಜನನಾಂಗಗಳಿಗೆ ಸಂಬಂಧಿಸಿದ ಕ್ಯಾನ್ಸರ್‌ಗಳು HPV ವೈರಸ್‌ನೊಂದಿಗೆ ಹೆಚ್ಚಾಗಿ ಸಂಬಂಧ ಹೊಂದಿರುವುದು ಕಂಡುಬಂದಿದ್ದು, ಈ ಲಸಿಕೆ ಅವುಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯುವಕ ಯುವತಿಯರಿಗೂ ಸಮಾನವಾಗಿ ಲಸಿಕೆ ನೀಡುವುದು ಅತ್ಯಂತ ಅಗತ್ಯ ಎಂದು ತಜ್ಞರು ಒತ್ತಿಹೇಳಿದ್ದಾರೆ. ವ್ಯಾಪಕ ಲಸಿಕಾಕರಣದ ಮೂಲಕ HPV ಸಂಬಂಧಿತ ಕ್ಯಾನ್ಸರ್ ಪ್ರಕರಣಗಳನ್ನು ಜಾಗತಿಕ ಮಟ್ಟದಲ್ಲಿ ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

HPV ಲಸಿಕೆ ಬಗ್ಗೆ ಜಾಗೃತಿ ಹೆಚ್ಚಿಸುವುದು ಮತ್ತು ಸುಲಭ ಲಭ್ಯತೆ ಒದಗಿಸುವುದು ಕ್ಯಾನ್ಸರ್ ತಡೆಗಟ್ಟುವಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ