ಶೃಂಗೇರಿ ವಿಧಾನಸಭಾ ಕ್ಷೇತ್ರ: ಮೇ 2ರಂದು 279 ಅಂಚೆ ಮತಗಳ ಮರುಪರಿಶೀಲನೆ; ಹೈಕೋರ್ಟ್ ಆದೇಶದಂತೆ ಸಿದ್ಧತೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ ಮಹತ್ವದ ಆದೇಶದಂತೆ, ಬರುವ ಮೇ 2ರಂದು ಅಂಚೆ ಮತಗಳ ಮರುಪರಿಶೀಲನೆ ಮತ್ತು ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಕೇವಲ 201 ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಒಟ್ಟು ಚಲಾವಣೆಯಾದ 2,811 ಅಂಚೆ ಮತಗಳಲ್ಲಿ 279 ಮತಗಳನ್ನು ನಿಯಮಬಾಹಿರವಾಗಿ ತಿರಸ್ಕರಿಸಲಾಗಿದೆ ಎಂದು ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.ಸ್ಥಳ: ಚಿಕ್ಕಮಗಳೂರಿನ ಐಡಿಎಸ್‌ಜಿ (IDSG) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಗಿ ಭದ್ರತೆಯ ನಡುವೆ ಈ ಮರುಪರಿಶೀಲನೆ ನಡೆಯಲಿದೆ.

ಇದನ್ನೂ ಓದಿ: Political: ಅಬಕಾರಿ ಇಲಾಖೆಯಲ್ಲಿ ಬಹುಕೋಟಿ ಹಗರಣ: ಬಿಜೆಪಿ ಆರೋಪ

ಚುನಾವಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಮರುಎಣಿಕೆಯ ಫಲಿತಾಂಶವು ಕ್ಷೇತ್ರದ ರಾಜಕೀಯ ಭವಿಷ್ಯದ ಮೇಲೆ ಕುತೂಹಲ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು