ಚಲಿಸುವ ರೈಲಿನಲ್ಲಿ ಗರ್ಭಿಣಿಗೆ ಹೆರಿಗೆ: ಬಿ.ಸಿ. ರೋಡ್ ರೈಲು ನಿಲ್ದಾಣದಲ್ಲಿ ಗಂಡು ಮಗುವಿನ ಜನನ

ಬಂಟ್ವಾಳ (ಬಿ.ಸಿ.ರೋಡ್): ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಅನಿರೀಕ್ಷಿತವಾಗಿ ಹೆರಿಗೆ ನೋವು ಕಾಣಿಸಿಕೊಂಡು, ರೈಲು ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಭಾನುವಾರ ರಾತ್ರಿ ಬಿ.ಸಿ. ರೋಡ್‌ನಲ್ಲಿ ನಡೆದಿದೆ.

ಮೈಸೂರು ಮೂಲದ ಪೊನ್ನಮ್ಮ ಎಂಬುವವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಬಿ.ಸಿ. ರೋಡ್ ತಲುಪುವಷ್ಟರಲ್ಲಿ ಅವರಿಗೆ ತೀವ್ರವಾದ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ರೈಲ್ವೆ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರು ನೆರವಿಗೆ ಧಾವಿಸಿದ್ದು, ರೈಲು ನಿಲ್ದಾಣದಲ್ಲಿ ಬೋಗಿಯೊಳಗೇ ಮಹಿಳೆ ಸುಗಮವಾಗಿ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: Mangalore : ಅಭಿಮಾನಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರಂಜಿಸುತ್ತಿದ್ದ ಆಶಾಕ್ಕ ಇನ್ನಿಲ್ಲ

ಘಟನೆ ತಿಳಿಯುತ್ತಿದ್ದಂತೆಯೇ ಬಿ.ಸಿ. ರೋಡ್ ರೈಲ್ವೆ ಅಧಿಕಾರಿಗಳು ಮತ್ತು ಸ್ಥಳೀಯ ಆರೋಗ್ಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದರು. ತಾಯಿ ಮತ್ತು ನವಜಾತ ಶಿಶುವನ್ನು ಹೆಚ್ಚಿನ ಚಿಕಿತ್ಸೆ ಮತ್ತು ಆರೈಕೆಗಾಗಿ ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಸಹ ಪ್ರಯಾಣಿಕರ ಮಾನವೀಯತೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು