ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

ಬೆಂಗಳೂರು: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಈ ಬಾಂಬ್ ಅನ್ನು ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು. ಇದರಿಂದಾಗಿ ಅಂದು ಭಾರಿ ಅನಾಹುತವೊಂದು ತಪ್ಪಿದಂತಾಗಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಪುರುಷೋತ್ತಮ್ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

Advertisement

ಇದನ್ನೂ ಓದಿ:ಬೆಂಗಳೂರು: ಅಪಹರಿಸಿ ಬಾಲಕಿಯ ಬರ್ಬರ ಹತ್ಯೆ, ಕಲ್ಲಿನಿಂದ ಮುಖ ಜಜ್ಜಿದ ಹಂತಕರು!

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಯುಎಪಿಎ (UAPA) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ 10 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡವನ್ನು ವಿಧಿಸಲಾಗಿದೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು