ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರಿಕ್‌ಗೆ 10 ವರ್ಷ ಶಿಕ್ಷೆಯಾದ ಬೆನ್ನಲ್ಲೇ, ಪ್ರಕರಣದ ಎರಡನೇ ಆರೋಪಿ ಹಾಗೂ ಈ ಘಟನೆಯಲ್ಲಿ ಜೀವನವನ್ನೇ ಕಳೆದುಕೊಂಡ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.
ಈ ಪ್ರಕರಣದ ಎರಡನೇ ಆರೋಪಿಯಾದ (A2) ಸೈಯದ್, ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ “ನಾನು ಯಾವುದೇ ತಪ್ಪು ಮಾಡಿಲ್ಲ” ಎಂದು ವಾದಿಸಿದ್ದಾನೆ. ತನ್ನ ಮೇಲಿನ ಆರೋಪಗಳನ್ನು ಆತ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧದ ಸಾಕ್ಷ್ಯ ವಿಚಾರಣೆಯನ್ನು ಮುಂದುವರಿಸಲು ನಿರ್ಧರಿಸಿದೆ. ಸೈಯದ್‌ನ ಪಾತ್ರದ ಕುರಿತು ಬರುವ ದಿನಗಳಲ್ಲಿ ಮತ್ತಷ್ಟು ವಿಚಾರಣೆ ನಡೆಯಲಿದೆ.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಆರ್ಥಿಕವಾಗಿ ಮತ್ತು ದೈಹಿಕವಾಗಿ ಹೈರಾಣಾಗಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಟಿವಿ9 ಕನ್ನಡದೊಂದಿಗೆ ಮಾತನಾಡಿ ತಮ್ಮ ನೋವು ತೋಡಿಕೊಂಡಿದ್ದಾರೆ. “ಶಾರಿಕ್‌ಗೆ ಶಿಕ್ಷೆ ವಿಧಿಸಿರುವುದು ನ್ಯಾಯಯುತವಾಗಿದೆ. ಆತ ಜೀವಮಾನವಿಡೀ ಜೈಲಿನಿಂದ ಹೊರಬರಬಾರದು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

“ಆತ ಮಾಡಿದ ತಪ್ಪಿಗೆ ನಾನು ಶಿಕ್ಷೆ ಅನುಭವಿಸಿದ್ದೇನೆ. ನನ್ನ ಬದುಕು ಇಂದು ಬೀದಿಗೆ ಬಂದಿದೆ. ಮುಂದೆ ಯಾರೂ ಇಂತಹ ಕೆಲಸಕ್ಕೆ ಕೈಹಾಕದಂತೆ ಕಠಿಣ ಶಿಕ್ಷೆಯಾಗಬೇಕು” ಎಂದು ಕಣ್ಣೀರಿಟ್ಟರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

