ಮಂಗಳೂರು: ನಗರದ ದೇರಳಕಟ್ಟೆಯಲ್ಲಿರುವ ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ವತಿಯಿಂದ ಆಯೋಜಿಸಲಾಗಿದ್ದ ‘ವಿಕಸಿತ ಭಾರತ-ವಿಷನ್ 2047’ ಉಪನ್ಯಾಸ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚಾಲನೆ ನೀಡಿದರು. ನಿಟ್ಟೆ ವಿನಯ ಹೆಗ್ಡೆ ಅವರ ಸ್ಮರಣಾರ್ಥ ಈ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನಿಟ್ಟೆ ವಿವಿ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಘಾಟಿಸಿದರು. ವಿನಯ ಹೆಗ್ಡೆ ಅವರ ಸ್ಮರಣಾರ್ಥ ಮುಂದಿನ ದಿನಗಳಲ್ಲಿ ನಡೆಯಲಿರುವ ಸರಣಿ ಕಾರ್ಯಕ್ರಮಗಳ ಪೈಕಿ ಇದು ಮೊದಲನೆಯದಾಗಿದೆ.

ಇದನ್ನೂ ಓದಿ:ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ವಿಶೇಷ ಪೂಜೆ ಸಲ್ಲಿಸಿದ ಹಣಕಾಸು ಸಚಿವೆ!
ಈ ಮಹತ್ವದ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕೇಂದ್ರ ಸರ್ಕಾರದ ‘ವಿಕಸಿತ ಭಾರತ’ ಗುರಿಯ ಕುರಿತು ಸಚಿವರು ಉಪನ್ಯಾಸ ನೀಡಿದರು. ದೇಶದ ಆರ್ಥಿಕ ಪ್ರಗತಿ ಮತ್ತು ಮುಂದಿನ ಹಾದಿಯ ಬಗ್ಗೆ ಅವರು ಪ್ರಮುಖ ಅಂಶಗಳನ್ನು ಹಂಚಿಕೊಂಡರು.ಸಚಿವರ ಭೇಟಿ ಹಾಗೂ ಗಣ್ಯರ ಆಗಮನದ ಹಿನ್ನೆಲೆಯಲ್ಲಿ ದೇರಳಕಟ್ಟೆ ಪರಿಸರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

