ಮೇ ಕೊನೆಯಲ್ಲಿ ಸಿಎಂ ಬದಲಾವಣೆ ಪಿಕ್ಸ್? ದೆಹಲಿಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಹೈಕಮಾಂಡ್ ಮುಂದೆ ಹೇಳಿದ್ದೇನು?

ದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ಯ ಚರ್ಚೆಯಲ್ಲಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೈಕಮಾಂಡ್ ನಾಯಕರಿಗೆ ಮಹತ್ವದ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಸಿಎಂ ಗೊಂದಲವನ್ನು ತಕ್ಷಣವೇ ಬಗೆಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ 50,000 ಕೋಟಿ ರೂ. ವೆಚ್ಚದಲ್ಲಿ 5 ಕೋಟಿ ಜನರಿಗೆ ಸೌಲಭ್ಯ ತಲುಪಿಸುತ್ತಿದೆ. ಇಂತಹ ಸಮಯದಲ್ಲಿ ನಾಯಕತ್ವದ ಬಗ್ಗೆ ಗೊಂದಲ ಸೃಷ್ಟಿಸುವುದು ಸರಿಯಲ್ಲ” ಎಂದು ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಹೈಕಮಾಂಡ್ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಆದರೆ 2.5 ವರ್ಷದ ಅಧಿಕಾರ ಹಂಚಿಕೆಯ ಮಾತುಕತೆಯ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ.

Advertisement

ಇದನ್ನೂ ಓದಿ:ಸಂಸದ ಪಪ್ಪು ಯಾದವ್ ಪೈಶಾಚಿಕ ಹೇಳಿಕೆ: ನಾಯಕರ ರೂಮ್‌ಗೆ ಹೋಗದೆ ಮಹಿಳೆಯರು ರಾಜಕೀಯ ಮಾಡಲಾಗಲ್ಲ!

ಹೈಕಮಾಂಡ್ ಮೇ ಅಂತ್ಯದ ವೇಳೆಗೆ ಈ ಬಗ್ಗೆ ಒಂದು ಗಟ್ಟಿ ನಿರ್ಧಾರಕ್ಕೆ ಬರಬಹುದು ಎಂಬ ಸುಳಿವನ್ನು ಅವರು ನೀಡಿದ್ದಾರೆ. ಅಲ್ಲದೆ, ಹಿರಿಯ ಶಾಸಕರಿಗೂ ಸಂಪುಟದಲ್ಲಿ ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಅವರು ಪುನರುಚ್ಚರಿಸಿದ್ದಾರೆ.

Advertisement

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು