ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶದ ಬೆನ್ನಲ್ಲೇ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಎರಡನೇ ಪರೀಕ್ಷೆ ಬರೆಯಲು ಯಾವುದೇ ಪರೀಕ್ಷಾ ಶುಲ್ಕ ಪಾವತಿಸುವ ಅಗತ್ಯವಿಲ್ಲ, ಈ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಫಲಿತಾಂಶದ ಅಂಕಿ-ಅಂಶಗಳು:

ಪರೀಕ್ಷೆ-1ರಲ್ಲಿ ಒಟ್ಟು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ವಿಷಯವಾರು ವಿವರ ಇಲ್ಲಿದೆ:
1 ವಿಷಯ: 20,691 ವಿದ್ಯಾರ್ಥಿಗಳು

2 ವಿಷಯ: 10,509 ವಿದ್ಯಾರ್ಥಿಗಳು
ಎಲ್ಲಾ ವಿಷಯ: 1,716 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 45 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಹಾಜರಾಗಬೇಕಿದೆ.
ಇದನ್ನೂ ಓದಿ: SSLC ಫಲಿತಾಂಶ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ 97%, ಶಾಲೆಗೆ ಪ್ರಗತಿ ಟಾಪರ್
ಸರ್ಕಾರದ ಈ ನಿರ್ಧಾರದ ಉದ್ದೇಶವೇನು?
ಶಿಕ್ಷಣ ಮೊಟಕು ತಡೆ: ಪರೀಕ್ಷೆಯಲ್ಲಿ ಫೇಲ್ ಆದ ಕಾರಣಕ್ಕೆ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಆಶಯ.
ಆರ್ಥಿಕ ಹೊರೆ ಇಳಿಕೆ: ಬಡ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪರೀಕ್ಷಾ ಶುಲ್ಕದ ಹೊರೆಯಾಗಬಾರದು ಎಂದು ಕಳೆದ ವರ್ಷದಂತೆಯೇ ಈ ಬಾರಿಯೂ ಉಚಿತ ಪರೀಕ್ಷೆಗೆ ಅವಕಾಶ ನೀಡಲಾಗಿದೆ.
ಅಂಕ ಸುಧಾರಣೆಗೆ ಅವಕಾಶ: ಕೇವಲ ಫೇಲ್ ಆದವರಷ್ಟೇ ಅಲ್ಲ, ಅಂಕ ಕಡಿಮೆ ಬಂದವರು ತಮ್ಮ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದರೆ ಅವರಿಗೂ ಈ ಪರೀಕ್ಷೆ ಬರೆಯಲು ಮುಕ್ತ ಅವಕಾಶವಿದೆ.
ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಲು ಇಲಾಖೆಯ ಉಪ ನಿರ್ದೇಶಕರಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಾಹಿತಿಯ ಕೊರತೆಯಿಂದ ಯಾವುದೇ ವಿದ್ಯಾರ್ಥಿ ಅವಕಾಶ ಕಳೆದುಕೊಳ್ಳಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

