ಸುಳ್ಯ ಜನಾಕ್ರೋಶ ಸಭೆ; ಮಹಿಳೆಯರ ವಿರುದ್ಧ ಕೆಲಸ ಮಾಡುತ್ತಿರುವ ಕಾಂಗ್ರೆಸ್: ಶಾಸಕಿ ಭಾಗೀರಥಿ ಮುರುಳ್ಯ

Sullia BJP protest

ಸುಳ್ಯ: ಕಾಂಗ್ರೆಸ್ ಪಕ್ಷವು ಮಹಿಳೆಯರ ಪರವಾಗಿ ಕೆಲಸ ಮಾಡದೆ, ಮಹಿಳೆಯರ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಕುರಿತ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸುಳ್ಯ ಮಹಿಳಾ ಮೋರ್ಚಾ ಮಂಡಲದ ವತಿಯಿಂದ ನಡೆದ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ 2023ರ ಕಾಯ್ದೆಯನ್ನು ಜಾರಿಗೊಳಿಸಲು ಪ್ರಯತ್ನಿಸಿತು, ಆದರೆ ಕಾಂಗ್ರೆಸ್ ಪಕ್ಷವು ಅದನ್ನು ವಿರೋಧಿಸಿತು ಎಂದರು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ ವಿರೋಧ: ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಮಹಿಳೆಯರು; ಶಾಸಕಿ ಭಾಗೀರಥಿ ಮುರುಳ್ಯ ಕಿಡಿ!

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಮತ್ತು ದೇಶದ ರಕ್ಷಣೆಯಲ್ಲಿಯೂ ಕೊಡುಗೆ ನೀಡಿದ್ದಾರೆ. ಮಹಿಳೆಯರಿಗೆ ಅಧಿಕಾರ ನೀಡಿದರೆ ಇಡೀ ಸಮಾಜವನ್ನು ಬದಲಾಯಿಸಬಹುದು, ಏಕೆಂದರೆ ತಾಯಿಯು ಮಗುವಿನ ಮೊದಲ ಗುರು ಎಂದರು.

33% ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಮೋದಿ ಸರ್ಕಾರ ಪ್ರಯತ್ನಿಸಿತು, ಆದರೆ ಕಾಂಗ್ರೆಸ್ ಪಕ್ಷವು ಕುಟುಂಬ ರಾಜಕೀಯದ ಕಾರಣದಿಂದ ಅದನ್ನು ವಿರೋಧಿಸಿತು. ಭವಿಷ್ಯದಲ್ಲಿ ಮಹಿಳಾ ಶಕ್ತಿಗೆ ಜಯ ಸಿಗುತ್ತದೆ ಮತ್ತು ನರೇಂದ್ರ ಮೋದಿ ಅವರು ಈ ಮಸೂದೆಯನ್ನು ಕಾನೂನುಬದ್ಧವಾಗಿ ಜಾರಿಗೊಳಿಸುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು