ಪುತ್ತೂರು: ನಗರದ ವಿವಿಧ ಭಾಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (MESCOM) ಪ್ರಕಟಣೆಯಲ್ಲಿ ತಿಳಿಸಿದೆ.


ಬೆಳಿಗ್ಗೆ 9:30ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ. 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಇದನ್ನೂ ಓದಿ: Puttur : ಕಳ್ಳತನ್ನ ತಪ್ಪಿಸಲು ಚಪ್ಪಲ್ ಗೆ ಬೀಗದ ಭದ್ರತೆ!

- ಕ್ಯಾಂಪ್ಕೋ ಫ್ಯಾಕ್ಟರಿ ಪರಿಸರ
- ಕೆಮ್ಮಿಂಜೆ
- ದರ್ಬೆ
- ಮುಕ್ರಂಪಾಡಿ
- ಕೂರ್ನಡ್ಕ
- ಸಂಪ್ಯ
ಕ್ಯಾಂಪ್ಕೋ ಫ್ಯಾಕ್ಟರಿ, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್‌ಗಳಲ್ಲಿ ಈ ನಿರ್ವಹಣಾ ಕಾರ್ಯ ನಡೆಯಲಿದ್ದು, ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

