ಸುಳ್ಯ: ನಿಂತಿದ್ದ ಸರ್ಕಾರಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; ಓರ್ವನಿಗೆ ಗಂಭೀರ ಗಾಯ!

ಸುಳ್ಯ: ಮಂಗಳವಾರ ಜಿಲ್ಲೆಯ ಅರಂತೋಡಿನಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಸ್ಸಿಗೆ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಕೊಯ್ನಾಡ್‌ನಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಅರಂತೋಡು ಎಂಬಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Advertisement

ಇದನ್ನೂ ಓದಿ:Accident : ಕಾರು-ಟ್ರಕ್ ಭೀಕರ ಅಪಘಾತದಲ್ಲಿ ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ದುರ್ಮರಣ

ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿ ಮಗು ಸೇರಿದಂತೆ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಪ್ರಯಾಣಿಕನಿಗೆ ತೀವ್ರ ಪೆಟ್ಟಾಗಿದೆ. ಗಾಯಾಳುವನ್ನು ಕೂಡಲೇ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು