ಬೆಂಗಳೂರು ಮಳೆಗೆ ಭೀಕರ ದುರಂತ: ಕಾಂಪೌಂಡ್ ಕುಸಿದು 7 ಬಲಿ; ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯು ಭೀಕರ ದುರಂತಕ್ಕೆ ಕಾರಣವಾಗಿದೆ. ಮಳೆಯ ತೀವ್ರತೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಏಳು ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ನಗರದಾದ್ಯಂತ ಸಂಜೆಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದುರ್ಬಲಗೊಂಡಿದ್ದ ಕಾಂಪೌಂಡ್ ಗೋಡೆಯೊಂದು ಕುಸಿದಿದೆ. ಮಣ್ಣಿನಡಿ ಸಿಲುಕಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರ ಬಗ್ಗೆ ಸಂಪೂರ್ಣ ಮಾಹಿತಿ ಇನ್ನು ಲಭ್ಯವಾಗಬೇಕಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ: ಸುಳ್ಯ: ನಿಂತಿದ್ದ ಸರ್ಕಾರಿ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು; ಓರ್ವನಿಗೆ ಗಂಭೀರ ಗಾಯ!

ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಹಾಗೂ ಘಟನೆಯ ಬಗ್ಗೆ ಅಧಿಕಾರಿಗಳಿಂದ ಪೂರ್ಣ ವಿವರ ಪಡೆಯಲಿದ್ದಾರೆ. ನಂತರ ಅವರು ಶಿವಾಜಿನಗರದ ಘಟನಾ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.

Advertisement

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು