ಬೆಂಗಳೂರು ಮಳೆಗೆ ಕಾಂಪೌಂಡ್ ಕುಸಿದು 7 ಬಲಿ; ಸಿಎಂ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ!

ಬೆಂಗಳೂರು: ರಾಜಧಾನಿಯಲ್ಲಿ ಇಂದು ಸಂಜೆ ಅಬ್ಬರಿಸಿದ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯು ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 7 ಜನರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತಪಟ್ಟ ಏಳು ಜನರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು.ಘಟನೆಯಲ್ಲಿ ಗಾಯಗೊಂಡಿರುವ ಇತರ 7 ಜನರಿಗೆ ಸರ್ಕಾರಿ ವೆಚ್ಚದಲ್ಲೇ ಉಚಿತ ಚಿಕಿತ್ಸೆ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

ಇದನ್ನೂ ಓದಿ: ಬೆಂಗಳೂರು ಮಳೆಗೆ ಭೀಕರ ದುರಂತ: ಕಾಂಪೌಂಡ್ ಕುಸಿದು 7 ಬಲಿ; ಬೌರಿಂಗ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ!

ಈ ದುರಂತದಲ್ಲಿ ಅಧಿಕಾರಿಗಳ ಅಜಾಗರೂಕತೆ ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯಬಿದ್ದರೆ ತಕ್ಷಣವೇ ಅಮಾನತುಗೊಳಿಸುವುದಾಗಿ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.ಮಳೆಯ ಆರ್ಭಟಕ್ಕೆ ಹಳೆಯ ಕಾಂಪೌಂಡ್ ಕುಸಿದಿರುವುದು ಈ ಅವಘಡಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಯಲ್ಲೇ ಇರಿಸಲಾಗಿದೆ.

Advertisement

ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು