ಉಡುಪಿ: ನಗರದ ಹೊರವಲಯದ ಕೊರಂಗ್ರಪಾಡಿ ಸಮೀಪದ ಗೋಪಾಲ ರಸ್ತೆಯಲ್ಲಿ ಬಾವಿ ಸ್ವಚ್ಛಗೊಳಿಸಲು ಇಳಿದು ಹೊರಬರಲಾರದೆ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಕೊರಂಗ್ರಪಾಡಿ ಗೋಪಾಲ ರಸ್ತೆ ನಿವಾಸಿ ಶ್ರೀಶ ಬಲ್ಲಾಳ್ ಅವರು ತಮ್ಮ ಮನೆಯ ಸುಮಾರು 90 ಅಡಿ ಆಳ ಹಾಗೂ 35 ಅಡಿ ಅಗಲದ ಬೃಹತ್ ಬಾವಿಯನ್ನು ಸ್ವಚ್ಛಗೊಳಿಸಲು ಕೆಳಗಿಳಿದಿದ್ದರು. ಆದರೆ, ಕೆಲಸ ಮುಗಿಸಿ ಮೇಲಕ್ಕೆ ಬರಲು ಸಾಧ್ಯವಾಗದೆ ಅವರು ಬಾವಿಯ ಒಳಗೇ ಪರದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭೀಕರ ಅಗ್ನಿ ಅವಘಡ; ವಾಣಿಜ್ಯ ಸಂಕೀರ್ಣದ ಅಂಗಡಿಗಳು ಭಸ್ಮ, ಲಕ್ಷಾಂತರ ಹಾನಿ!
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಶ್ರೀಶ ಬಲ್ಲಾಳ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ಈ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

