ವಿಜಯಪುರ: ಜಿಲ್ಲೆಯ ನಗರದ ಹೊರವಲಯದ ಶಿವಗಿರಿ ಬಳಿ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ.
ಮೃತರನ್ನು ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ತಮ್ಮಣ್ಣ ರಬಕವಿ (35) ಎಂದು ಗುರುತಿಸಲಾಗಿದೆ. ತಮ್ಮಣ್ಣ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಲಾರಿಯ ಚಕ್ರವು ತಮ್ಮಣ್ಣ ಅವರ ಮುಖದ ಮೇಲೆ ಹರಿದಿದ್ದು, ಮುಖವು ಸಂಪೂರ್ಣ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಪ್ರಾಣಪಕ್ಷಿ ಹಾರಿಹೋಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ
ಘಟನಾ ಸ್ಥಳಕ್ಕೆ ವಿಜಯಪುರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

