ನವದೆಹಲಿ: ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಇಂದಿನಿಂದ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ, ವಾಣಿಜ್ಯ ಸಿಲಿಂಡರ್ ಬೆಲೆಯು ₹993 ರಷ್ಟು ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಒಂದು ಸಿಲಿಂಡರ್ ದರ ₹3,071.50 ಕ್ಕೆ ತಲುಪಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಇನ್ನೊಂದೆಡೆ, ವಿಮಾನ ಇಂಧನ (ATF) ದರಗಳಲ್ಲಿ ಶುಕ್ರವಾರ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದ್ದರೂ, ವಿಮಾನಯಾನ ಸಂಸ್ಥೆಗಳು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ತೈಲ ಕಂಪನಿಗಳು ಈ ಬೆಲೆ ಏರಿಕೆಯನ್ನು ತಾವೇ ಭರಿಸಲು ನಿರ್ಧರಿಸಿವೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.


