ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಯ್ದ 15 ಮತಗಟ್ಟೆಗಳಲ್ಲಿ ಇಂದು (ಮೇ 02) ಬೆಳಗ್ಗೆ 7 ಗಂಟೆಯಿಂದಲೇ ಮರು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಆರಂಭವಾಗಿದೆ.
ಮತದಾನ ನಡೆಯುತ್ತಿರುವ ಬೂತ್‌ಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇದನ್ನೂ ಓದಿ: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..;: ಸಿಎಂ ಗೈರು ಹಾಜರಿಗೆ ರಾಷ್ಟ್ರಪತಿ ಮುರ್ಮು ಬೇಸರ
ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ವಿವಿಧ ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಅತ್ಯಂತ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿರುವುದು ಕಂಡುಬಂದಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಮತಗಟ್ಟೆಗೆ ಬರುವಂತೆ ಚುನಾವಣಾ ಆಯೋಗವು ಭರವಸೆ ನೀಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

