ಮಂಗಳೂರು: ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ; ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಮಂಗಳೂರು: ನಗರದ ನಂತೂರು ಜಂಕ್ಷನ್ ಸಮೀಪದ ಅಪಾರ್ಟ್‌ಮೆಂಟ್ ಒಂದರಲ್ಲಿ ಶುಕ್ರವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿ ಕಾಣಿಸಿಕೊಂಡ ಕೊಠಡಿಯಲ್ಲಿದ್ದ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಹಾನಿಯ ಒಟ್ಟು ಮೊತ್ತದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದಾಗಿ ಒಂದು ದೊಡ್ಡ ಮಟ್ಟದ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ರಸ್ತೆಯಲ್ಲೇ ಉರುಳಿ ಬಿದ್ದ ಓಮ್ನಿ ಕಾರು; ಪಾದಚಾರಿಗಳ ಮೇಲೆ ಹರಿದು ಭೀಕರ ಅಪಘಾತ!

ಜನನಿಬಿಡ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಈ ಘಟನೆ ಸಂಭವಿಸಿದ್ದರಿಂದ, ಅಲ್ಲಿನ ನಿವಾಸಿಗಳು ಕೆಲಕಾಲ ತೀವ್ರ ಆತಂಕಕ್ಕೊಳಗಾಗಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು