ಧರ್ಮಸ್ಥಳದ ಕುರಿತು ವಿವಾದಾತ್ಮಕ ಹೇಳಿಕೆ: ಗಿರೀಶ್ ಮಟ್ಟೆಣ್ಣನವರ್ ವಿರುದ್ಧ ಮತ್ತೊಂದು FIR ದಾಖಲು

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಅಲ್ಲಿನ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ಗಿರೀಶ್ ಮಟ್ಟೆಣ್ಣನವರ್ ವಿರುದ್ಧ ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ.

ಕಾವೇರಿ ಎಂಬುವವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ತಾವು ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತೆಯಾಗಿದ್ದು, ಮಟ್ಟೆಣ್ಣನವರ್ ಅವರ ಮಾತುಗಳಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ತೀವ್ರ ನೋವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

2023ರ ಡಿಸೆಂಬರ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದ ‘ಜನಾಂದೋಲನ ಸಭೆ’ಯಲ್ಲಿ ಮಟ್ಟೆಣ್ಣನವರ್ ಭಾಷಣ ಮಾಡಿದ್ದರು.

“ಧರ್ಮಸ್ಥಳದ ಸಾಮೂಹಿಕ ವಿವಾಹದಲ್ಲಿ ಮೊದಲ ರಾತ್ರಿ (First Night) ಅವರ ಜೊತೆಯೇ ಮಾಡಬೇಕು” ಹಾಗೂ “ಹೊಸದಾಗಿ ಮದುವೆಯಾದ ಜೋಡಿ ಲಾಡ್ಜ್‌ಗೆ ಹೋದರೆ ಹಲ್ಲೆ ಮತ್ತು ಅತ್ಯಾಚಾರ ಮಾಡುತ್ತಾರೆ” ಎಂಬ ಆಘಾತಕಾರಿ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ದೈಹಿಕ ಶಿಕ್ಷಕನಿಗೆ ಶಿಕ್ಷೆ ಪ್ರಕಟ

ಈ ವಿವಾದಾತ್ಮಕ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶ್ರೀಕ್ಷೇತ್ರದ ಘನತೆಗೆ ಚ್ಯುತಿ ತರುವಂತಹ ಇಂತಹ ಹೇಳಿಕೆಗಳ ವಿರುದ್ಧ ಭಕ್ತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು