ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ಅವರು ಸೋಲನ್ನು ಅನುಭವಿಸಿದ್ದಾರೆ.
ಇದೇ ವೇಳೆ ಕ್ಷೇತ್ರದಲ್ಲಿ ಮೂರನೇ ಶಕ್ತಿಯಾಗಿ ಕಾಣಿಸಿಕೊಂಡ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಪೇಟೆ ಅವರು ಸುಮಾರು 17 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮತ ಎಣಿಕಾ ಕೇಂದ್ರದ ಬಳಿ ಮಾತನಾಡಿದ ಅವರು, ಕ್ಷೇತ್ರದ ಜನರ ಬದಲಾವಣೆಯ ಬಯಕೆಯೇ ತಮಗೆ ಇಷ್ಟು ಮತಗಳು ಬರಲು ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: ಅಪ್ಪನ ಕ್ಷೇತ್ರ ಬಾಗಲಕೋಟೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ; ಬಿಜೆಪಿ ಅಭ್ಯರ್ಥಿ ಚರಂತಿಮಠಗೆ ಸೋಲು


