ಭಾರತ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ 2026ರ ಕೇರಳ ವಿಧಾನಸಭಾ ಚುನಾವಣಾ ಫಲಿತಾಂಶದ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಸ್ಪಷ್ಟ ಮುನ್ನಡೆಯತ್ತ ಸಾಗಿದೆ. ಕಾಂಗ್ರೆಸ್ ಪಕ್ಷವು ಇದುವರೆಗೆ 58 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇನ್ನುಳಿದ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಆಡಳಿತಾರೂಢ ಸಿಪಿಐ(ಎಂ) ಪಕ್ಷವು 24 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ ಮತ್ತು ಪ್ರಸ್ತುತ 2 ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) 20 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಸಿಪಿಐ ಇದುವರೆಗೆ 7 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

