ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ: ಸೋತರೂ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಣೆ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವ ಲಕ್ಷಣಗಳು ಕಾಣುತ್ತಿವೆ. ಚುನಾವಣೆಯಲ್ಲಿ ಟಿಎಂಸಿ (TMC) ಸೋಲೊಪ್ಪಿಕೊಂಡಿದ್ದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿದೆ. ಆದರೂ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆಗಳು ನಿಷ್ಪಕ್ಷಪಾತವಾಗಿ ನಡೆದಿಲ್ಲ. ಒಂದು ವೇಳೆ ಚುನಾವಣೆ ಸರಿಯಾಗಿ ನಡೆದಿದ್ದರೆ ನಾನು ಖಂಡಿತವಾಗಿಯೂ ರಾಜೀನಾಮೆ ನೀಡುತ್ತಿದ್ದೆ ಎಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

Advertisement

ಮಮತಾ ಬ್ಯಾನರ್ಜಿ ಅವರ ಈ ಹಠಮಾರಿ ಧೋರಣೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಬಹುಮತ ಕಳೆದುಕೊಂಡರೂ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ನಿರಾಕರಿಸುತ್ತಿರುವುದರಿಂದ, ಕೇಂದ್ರ ಸರ್ಕಾರ ಅಥವಾ ರಾಷ್ಟ್ರಪತಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಒಂದೇ ಒಂದು ಮತದ ಅಂತರದಲ್ಲಿ ಸೋತ ಸಚಿವ!: ನಟ ವಿಜಯ್ ಪಕ್ಷದ ಅಭ್ಯರ್ಥಿಗೆ ಸಿಕ್ಕಿತು ರೋಚಕ ಗೆಲುವು

ಈ ಬೆಳವಣಿಗೆಯಿಂದಾಗಿ ಪಶ್ಚಿಮ ಬಂಗಾಳದ ರಾಜಕೀಯ ಪರಿಸ್ಥಿತಿ ಇನ್ನಷ್ಟು ಕಗ್ಗಂಟಾಗಿದ್ದು, ಮುಂದಿನ ಹಂತದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *