ಬೆಳ್ತಂಗಡಿ: ಬೈಕ್‌ಗೆ ಹಿಂಬದಿಯಿಂದ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಳು ಪೇಟೆಯಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಬಾಳಂಜ ಗ್ರಾಮ ನಿವಾಸಿ ಜಯ ಮೆಸ್ತ್ರಿ (49) ಎಂದು ಗುರುತಿಸಲಾಗಿದೆ. ಅವರು ಬೆಳಾಳು ಗ್ರಾಮದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪರ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು; ಚಿಕ್ಕಮಗಳೂರು ನಿವಾಸಿ ಪ್ರಾಣಾಪಾಯದಿಂದ ಪಾರು!
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

