ಬೆಳಗಾವಿ: ಸ್ಕಿಪ್ಪಿಂಗ್ ಹಗ್ಗ ತೆಗೆಯಲು ಹೋಗಿ ವಿದ್ಯುತ್ ಅವಘಡಕ್ಕೆ ಬಲಿಯಾದ 9 ವರ್ಷದ ಬಾಲಕಿ!

ಆಟವಾಡುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ವಿದ್ಯುತ್ ತಂತಿ ತಗುಲಿ ಮನೆಯ ಮೇಲಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಸ್ಕಿಪ್ಪಿಂಗ್ ಹಗ್ಗವನ್ನು ಮರಳಿ ಪಡೆಯಲು ಹೋದ ಈಕೆಯ ಪ್ರಯತ್ನ ದುರಂತದಲ್ಲಿ ಅಂತ್ಯಗೊಂಡಿದೆ.

ಇಂಗಳಿ ಗ್ರಾಮದ ನಿವಾಸಿ ಸಾನ್ವಿ ಕಾಂಬಳೆ (9) ಮೃತಪಟ್ಟ ದುರ್ದೈವಿ. ಈಕೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆಯಿಂದ ಬಂದ ಸಾನ್ವಿ ಮನೆಯ ಮಾಳಿಗೆಯ ಮೇಲೆ ಆಟವಾಡುತ್ತಿದ್ದಳು. ಈ ವೇಳೆ ಆಕೆಯ ಸ್ಕಿಪ್ಪಿಂಗ್ ಹಗ್ಗವು ಮನೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ.

ಇದನ್ನೂ ಓದಿ: Crime : ಪತ್ನಿಯನ್ನು ಹೂತ ಜಾಗದಲ್ಲೇ ನಾಯಿಯ ಶವವನ್ನು ಹೂತು ಯಾಮಾರಿಸಿದ ಪಾಪಿ ಪತಿ

ತಂತಿಯ ಮೇಲಿದ್ದ ಹಗ್ಗವನ್ನು ತೆಗೆಯಲು ಪ್ರಯತ್ನಿಸಿದಾಗ ಸಾನ್ವಿಗೆ ವಿದ್ಯುತ್ ಪ್ರವಹಿಸಿ ತೀವ್ರವಾಗಿ ಶಾಕ್ ಹೊಡೆದಿದೆ. ಈ ರಭಸಕ್ಕೆ ಆಕೆ ಮನೆಯ ಮೇಲ್ಭಾಗದಿಂದ ಕೆಳಕ್ಕೆ ಬಿದ್ದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ತೀವ್ರ ಒಳಪೆಟ್ಟುಗಳಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ಘಟನೆಯಿಂದ ಇಂಗಳಿ ಗ್ರಾಮದಲ್ಲಿ ಶೋಕ ಸಾಗರ ಆವರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು