ತಮಿಳುನಾಡಿನ ನೂತನ ಸಿಎಂ ಆಗಿ ದಳಪತಿ ವಿಜಯ್ ಪ್ರಮಾಣವಚನಕ್ಕೆ ಸಿದ್ಧತೆ: ಯಾರ ಜೊತೆಗೆ ಮೈತ್ರಿ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಯಶಸ್ಸು ಕಂಡಿರುವ ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೈತ್ರಿಯು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದು, ವಿಜಯ್ ಶೀಘ್ರದಲ್ಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ. ಕಾಂಗ್ರೆಸ್ ನಾಯಕರಾದ ಗಿರೀಶ್ ಚೋಡಂಕರ್ ಮತ್ತು ಪ್ರವೀಣ್ ಚಕ್ರವರ್ತಿ ಅವರು ಈಗಾಗಲೇ ಟಿವಿಕೆ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: ಒಂದೇ ಒಂದು ಮತದ ಅಂತರದಲ್ಲಿ ಸೋತ ಸಚಿವ!: ನಟ ವಿಜಯ್ ಪಕ್ಷದ ಅಭ್ಯರ್ಥಿಗೆ ಸಿಕ್ಕಿತು ರೋಚಕ ಗೆಲುವು

ಮೊದಲಿನಿಂದಲೂ ರಾಹುಲ್ ಗಾಂಧಿ ಅವರು ವಿಜಯ್ ಅವರ ಪಕ್ಷಕ್ಕೆ ಬೆಂಬಲ ನೀಡುವ ಒಲವು ಹೊಂದಿದ್ದರು. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯಂತೆ ತಮಿಳುನಾಡು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ನಡೆದ ಆನ್‌ಲೈನ್ ಸಭೆಯ ಬಳಿಕ ಈ ಅಧಿಕೃತ ನಿರ್ಧಾರಕ್ಕೆ ಬರಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *