ಮಲಯಾಳಂ ಹಿರಿಯ ನಟ ಸಂತೋಷ್ ಕೆ. ನಾಯರ್ ರಸ್ತೆ ಅಪಘಾತದಲ್ಲಿ ನಿಧನ

ಪತ್ತನಂತಿಟ್ಟ: ಮಲಯಾಳಂ ಚಿತ್ರರಂಗದ ಖ್ಯಾತ ಹಿರಿಯ ನಟ ಸಂತೋಷ್ ಕೆ. ನಾಯರ್ ಅವರು ಕೇರಳದ ಪತ್ತನಂತಿಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಂಗಳವಾರ ಮುಂಜಾನೆ ಸಂತೋಷ್ ಕೆ. ನಾಯರ್ ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬಂದ ವ್ಯಾನ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಈ ಅಪಘಾತದ ತೀವ್ರತೆಗೆ ನಟ ಸಂತೋಷ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರ ಪತ್ನಿಗೂ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಗುರುತು ಪತ್ತೆಗೆ ಪೊಲೀಸರ ಮನವಿ

1982ರಲ್ಲಿ ತೆರೆಕಂಡ ‘ಇದ್ ಞಂಙಳುಡೆ ಕಥಾ’ ಚಿತ್ರದ ಮೂಲಕ ಇವರು ಅಭಿನಯ ರಂಗಕ್ಕೆ ಪದಾರ್ಪಣೆ ಮಾಡಿದ್ದರು. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 100ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಪ್ರಮುಖವಾಗಿ ಖಳನಾಯಕ ಹಾಗೂ ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಹಿರಿಯ ನಟನ ಅಕಾಲಿಕ ನಿಧನಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು