ಬೆಂಗಳೂರು: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಹಾಗೂ ಲೀಗ್ ಪಂದ್ಯಗಳನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗ ನಿರಾಸೆಯಾಗಿದೆ. ಈ ಮೊದಲು ವರದಿಯಾದಂತೆ ಫೈನಲ್ ಪಂದ್ಯವು ಬೆಂಗಳೂರಿನಲ್ಲೇ ನಡೆಯಲಿದೆ ಎಂಬ ನಿರೀಕ್ಷೆಯಿತ್ತು. ಆದರೆ, ಬಿಸಿಸಿಐ ಬಿಡುಗಡೆ ಮಾಡಿರುವ ಪ್ಲೇ-ಆಫ್ ವೇಳಾಪಟ್ಟಿಯು ಕನ್ನಡಿಗರಿಗೆ ಹಾಗೂ ಆರ್ಸಿಬಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಐಪಿಎಲ್ 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನ ಬದಲಿಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.
ಇದನ್ನೂ ಓದಿ: IPL: ಸಂಜು ಸ್ಯಾಮ್ಸನ್ ಸ್ಫೊಟಕ ಬ್ಯಾಟಿಂಗ್ ಪ್ರದರ್ಶನಕ್ಕೆ ಎಂಎಸ್ ಧೋನಿ ದಾಖಲೆ ಪುಡಿ
ಲೀಗ್ ಹಂತ ಮುಗಿಯುವ ಈ ಸಮಯದಲ್ಲಿ ಹೊರಬಿದ್ದಿರುವ ಈ ನಿರ್ಧಾರವು ಕ್ರೀಡಾ ಪ್ರೇಮಿಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಅತಿ ಹೆಚ್ಚು ಪ್ರೇಕ್ಷಕರಿಗೆ ಅವಕಾಶವಿರುವ ಮತ್ತು ಅತ್ಯಾಧುನಿಕ ಸೌಲಭ್ಯಗಳಿರುವ ಕಾರಣ ನೀಡಿ ಈ ಬದಲಾವಣೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

