ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಬಿಜೆಪಿ ಆಪ್ತ ಸಹಾಯಕನ ಕೊಲೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಭೀಕರ ಹಿಂಸಾಚಾರ  ಪ್ರಾರಂಭವಾಗಿದೆ. ಬುಧವಾರ ರಾತ್ರಿ ಉತ್ತರ 24 ಪರಗಣಗಳ ಜಿಲ್ಲೆಯ ಮಧ್ಯಮ ಗ್ರಾಮದ ದೋಹಾರಿಯ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಎನ್ನಲಾದ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ 2026: ಮೇ 15 ರಿಂದ ಪ್ರವೇಶ ಪತ್ರ ಲಭ್ಯ; ಜೂನ್‌ನಲ್ಲಿ ಪರೀಕ್ಷೆ!

ಬುಧವಾರ ರಾತ್ರಿ ಸುಮಾರು 10 :20ಕ್ಕೆ ಚಂದ್ರನಾಥ್ ರಥ್  ಅವರು  ಬರಾಸಾತ್ ನಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ಮರಳುವಾಗ  ದೋಹರಿಯ ಪ್ರದೇಶದಲ್ಲಿ ಮೋಟರು ಸೈಕಲ್ ಗಳಲ್ಲಿ ಬಂದ ಅಪರಿಚಿತರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ ಒಬ್ಬ ವ್ಯಕ್ತಿ ಕಾರಿನ ಕಿಟಕಿ ಹತ್ತಿರ ಬಂದು ಚಂದ್ರನಾಥ್ ರಾಥ್ ಮೇಲೆ ಮೂರು ಸುತ್ತು ಗುಂಡು  ಹಾರಿಸಿದ್ದು,   ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್   ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಕೊಲ್ಕತ್ತಾದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನ್ನ ಆಪ್ತನ ಹತ್ಯೆಯ ಸುದ್ದಿ ತಿಳಿಯುತ್ತಿದ್ದ ಹಾಗೆ ಸುವೇಂದು ಅಧಿಕಾರಿ ಆಸ್ಪತ್ರೆಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸುಮಿಕ್ ಭಟ್ಟಾಚಾರ್ಯ ಪ್ರತಿಕ್ರಿಯಿಸಿದ್ದು , ಇದು ನಿರೀಕ್ಷಿತವಾಗಿದ್ದು ಟಿಎಂಸಿ ಇಷ್ಟೊಂದು ಕೆಳಮಟ್ಟಕೆ ಇಳಿಯುತ್ತದೆ ಎಂದು  ಭಾವಿಸಿರಲಿಲ್ಲ ವಿರೋಧ ಪಕ್ಷದ ನಾಯಕನ ಆಪ್ತ ಸಹಾಯಕನನ್ನು ಕೊಳ್ಳುವ ಮೂಲಕ ಏನು ಸಂದೇಶ ಕೊಡಲು ಹೊರಟಿದೇ,  ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಚಂದ್ರನಾಥ 2018 ರಿಂದ ಸುವೇಂದು ಎಂದು ಅಧಿಕಾರಿಯೊಂದಿಗೆ ಗುರುತಿಸಿಕೊಂಡಿದ್ದರು ಮತ್ತು ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು