ಎಂಟು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು ನಗರ ಪೊಲೀಸರಿಂದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ “ಕಾಪ್ರಿ ಸಿದ್ದೀಕ್” ಬಂಧನಕ್ಕೊಳಗಾಗಿದ್ದಾನೆ. ಆತನು ಕಳ್ಳತನ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯವು ಹಲವು ಜಾಮೀನು ರಹಿತ ವಾರಂಟ್ (NBW)ಗಳನ್ನು ಜಾರಿ ಮಾಡಿತ್ತು. ಆದರೆ 2018ರಿಂದ ಆತ ಪರಾರಿಯಾಗಿದ್ದನು.

ಇದನ್ನೂ ಓದಿ : ಲಾಕಪ್ ಕೀ ನುಂಗಿದ ಯುವಕ: ಹೊಟ್ಟೆಯಿಂದ ಹೊರತರಲು 10ಕೆಜಿ ಬಾಳೆ ಹಣ್ಣು ನೀಡಿದ ವೈದ್ಯರು 

ಮಂಗಳೂರು ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ವಿಶೇಷ ತಂಡ ರಚಿಸಲಾಗಿದ್ದು, PSI ಸಿದ್ದಪ್ಪ ನೇತೃತ್ವದ ತಂಡ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನು ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಎಂದು ತಿಳಿದುಬಂದಿದೆ.

ಬಂಧನದ ಬಳಿಕ ಆರೋಪಿಯನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು