ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ  ಅವರು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಕೊಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌.ಎನ್‌. ರವಿ ಅವರು ಪ್ರಮಾಣವಚನ ಬೋಧಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್‌ಡಿಎ ನಾಯಕರು ಭಾಗವಹಿಸಿದ್ದರು. ಬಿಜೆಪಿ 2026ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ 15 ವರ್ಷಗಳ ಕಾಂಗ್ರೆಸ್ ಆಡಳಿತಕ್ಕೆ ತೆರೆ ಎಳೆದಿದೆ.

ಸುವೇಂದು ಅಧಿಕಾರಿ ಅವರ ಪ್ರಮಾಣವಚನದೊಂದಿಗೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಸಚಿವ ಸಂಪುಟ ಹೇಗಿದೆ

ಬಿಜೆಪಿಯ ಹಿರಿಯ ನಾಯಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಕ್ಷುದಿರಾಮ್ ತುಡು ಮತ್ತು ನಿಸಿತ್ ಪ್ರಾಮಾಣಿಕ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು