ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ 

ತಮಿಳು ನಟ-ರಾಜಕಾರಣಿ ವಿಜಯ್  ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಟಿವಿಕೆ (Tamilaga Vettri Kazhagam) ಪಕ್ಷದ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರಲೇಕಾರ್  ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸುಮಾರು ಆರು ದಶಕಗಳ ಡಿಎಂಕೆ–ಎಐಎಡಿಎಂಕೆ ಪ್ರಭುತ್ವಕ್ಕೆ ಅಂತ್ಯ ಹಾಡಿ, ಟಿವಿಕೆ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಇದನ್ನೂ ಓದಿ : ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ವಿಜಯ್ ಸಚಿವ ಸಂಪುಟದಲ್ಲಿ ಎನ್. ಆನಂದ್, ಆಧವ್ ಅರ್ಜುನಾ, ಕೆ.ಜಿ. ಅರುನ್ರಾಜ್, ಕೆ.ಎ. ಸೆಂಗೊಟ್ಟೈಯನ್, ಪಿ. ವೆಂಕಟರಮಣನ್, ಸಿ.ಟಿ.ಆರ್. ನಿರ್ಮಲ್ ಕುಮಾರ್, ರಾಜ್‌ಮೋಹನ್ ಅರುಮುಗಂ, ಟಿ.ಕೆ. ಪ್ರಭು ಹಾಗೂ ಎಸ್. ಕೀರ್ತನಾ ಅವರಿಗೆ ಸ್ಥಾನ ನೀಡಲಾಗಿದೆ.

2026ರ ವಿಧಾನಸಭೆ ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಳಿಕ ಕಾಂಗ್ರೆಸ್, ಸಿಪಿಐ, ಸಿಪಿಎಂ, ವಿಸಿಕೆ ಹಾಗೂ ಐಯುಎಂಎಲ್ ಬೆಂಬಲದೊಂದಿಗೆ ವಿಜಯ್ ಸರ್ಕಾರ ರಚನೆಗೆ ಅಗತ್ಯ ಬಹುಮತ ಪಡೆದರು.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು