ಬೆಳ್ತಂಗಡಿ: ತಾಲೂಕಿನ ಬೆಳ್ತಂಗಡಿ ಪೇಟೆಯ ಹೃದಯಭಾಗದಲ್ಲಿ ಕ್ಯಾಂಟೀನ್ ಒಂದರ ಮರೆಯಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬೆಳ್ತಂಗಡಿ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂವರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಬಸ್ ನಿಲ್ದಾಣದ ಸಮೀಪವಿರುವ ಕಟ್ಟಡವೊಂದರಲ್ಲಿ ‘ಕ್ಯಾಂಟಿನ್’ ನಡೆಸುವ ಸೋಗಿನಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಸ್ಥಳೀಯರಿಗೆ ಅನುಮಾನ ಬರದಂತೆ ಕ್ಯಾಂಟೀನ್ ಹೆಸರಿನಲ್ಲಿ ಈ ದಂಧೆಯನ್ನು ಸಂಘಟಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ: Belthangady: ಸುಮಂತ್ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸರಿಗೆ ಮನವಿ
ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರ ನೇತೃತ್ವದ ತಂಡವು ಈ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಂಧೆಯಲ್ಲಿದ್ದ ಮಹಿಳೆಯರನ್ನು ರಕ್ಷಿಸಲಾಗಿದ್ದು, ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಧೆಯ ಹಿಂದಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


