ದೆಹಲಿ : ನಬಿ ಕರೀಮ್ ಪ್ರದೇಶದಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. 28 ವರ್ಷದ ನವವಿವಾಹಿತೆಯ ಶವವು ಬಾಡಿಗೆ ಮನೆಯ ಮಂಚದ ಒಳಗಿನ ಬಾಕ್ಸ್ ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆ ಬಳಿಕ ಮಹಿಳೆಯ ಪತಿ ಪರಾರಿಯಾಗಿದ್ದು, ಪೊಲೀಸರು ಅವನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ದಂಪತಿ ಕೇಂದ್ರ ದೆಹಲಿಯ ನಬಿ ಕರೀಮ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹಲವು ಗಂಟೆಗಳ ಕಾಲ ಮಹಿಳೆ ಕಾಣಿಸದಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮನೆಯ ಮಾಲೀಕರು ಮತ್ತು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಕೊಠಡಿಯನ್ನು ಪರಿಶೀಲಿಸಿದಾಗ, ಮಂಚದ ಒಳಗಿನ ಬಾಕ್ಸ್ ನಲ್ಲಿ ಮಹಿಳೆಯ ಶವ ಪತ್ತೆಯಾಯಿತು.
ಇದನ್ನೂ ಓದಿ ಕನ್ಫರ್ಮ್ ಟಿಕೆಟ್ ಕನಸೇ?: ರೈಲ್ವೆ ಪ್ರಯಾಣಿಕರ ಸಂಕಷ್ಟ ಬಯಲಿಗೆ
ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ನಡೆದ ಬಳಿಕ ಪತಿ ನಾಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಆರೋಪಿಯಾಗಿರುವ ಪತಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ


