ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಐತಿಹಾಸಿಕ ಪ್ರಸಿದ್ಧ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದಾರೆ.
ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಗುಜರಾತ್ ನ ಐತಿಹಾಸಿಕ ಪ್ರಸಿದ್ಧ ಸೋಮನಾಥ ದೇವಾಲಯದ ಮೇಲೆ 1026ರ ಜನವರಿಯಲ್ಲಿ ಮೊದಲ ಬಾರಿಗೆ ಮಹಮ್ಮದ್ ಘಜ್ನಿ ದಾಳಿ ನಡೆಸಿ ನಿನ್ನೆಗೆ ಒಂದು ಸಾವಿರ ವರ್ಷಗಳು ಕಳೆದಿವೆ. ಇಂದಿಗೂ ಈ ದೇವಾಲಯ ವೈಭವದಿಂದ ಕಂಗೊಳಿಸುತ್ತಿದ್ದು, ದೇವಾಲಯದ ಮೇಲೆ ನಡೆಸಿದ ಮೊದಲ ದಾಳಿಯ ಸಾವಿರ ವರ್ಷದ ನೆನಪಿನ ಭಾಗವಾಗಿ ‘ ಸೋಮನಾಥ ಸ್ವಾಭಿಮಾನ ಪರ್ವ ‘ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇದನ್ನೂ ಓದಿ : ಅಯೋಧ್ಯೆ ಶ್ರೀ ರಾಮ ಮಂದಿರದ ಸುತ್ತಮುತ್ತ ಮಾಂಸಹಾರ ಸೇವನೆಗಿಲ್ಲ ಅವಕಾಶ
ಸಂಸ್ಕೃತ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿದರು. ಓಂಕಾರ ಮಂತ್ರ ಪಠಣದಲ್ಲಿ ಭಾಗಿಯಾಗಿ ಗುಜರಾತ್ ಮುಖ್ಯಮಂತ್ರಿ ಉಪೇಂದ್ರ ಪಾಟೀಲ್ ಹಾಗೂ ನೂರಾರು ಭಕ್ತರು ಭಾಗಿಯಾಗಿದ್ದರು.
ಶ್ರೀ ಸೋಮನಾಥ ಟ್ರಸ್ಟ್ನ ಸಭೆಯಲ್ಲಿ ಭಾಗಿಯಾಗಿ ಸಭೆಯ ಅಧ್ಯಕ್ಷತೆ ವಹಿಸಿ ದೇವಾಲಯದ ಅಭಿವೃದ್ಧಿಯ ಕುರಿತು ಸಭೆ ನಡೆಸಿದರು. ಇದರ ಜೊತೆಗೆ ವಿಶೇಷ ಡ್ರೋನ್ ಶೋ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಈ ಬೆಳಕಿನ ಕಿರಣವು ಭಾರತದ ಸಾಂಸ್ಕೃತಿಕ ಶಕ್ತಿಯ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರಲಿ ಎಂದರು. ಪ್ರಧಾನಿ ಮೋದಿಯವರ ವಾಹನ ಶನಿವಾರ ದೇವಸ್ಥಾನ ಅಂಗಳ ತಲುಪುತ್ತಿದ್ದಂತೆ ಎರಡು ಕಡೆ ನಿಂತಿದ್ದ ಜನ ಪುಷ್ಪ ಮಳೆ ಸುರಿಸಿ ಸ್ವಾಗತ ಮಾಡಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

