ಬಂಟ್ವಾಳ: ಜಾತ್ರೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಅದೃಷ್ಟವಶಾತ್ ರಿಕ್ಷಾದಲ್ಲಿದ್ದ ನಾಲ್ವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಬುಧವಾರ ಮುಂಜಾನೆ ಸುಮಾರು 2 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಉದ್ಯಾವರ ಮಾಡ ಕ್ಷೇತ್ರದ ಜಾತ್ರಾ ಮಹೋತ್ಸವ ಮುಗಿಸಿ ಚಟ್ಟೆಕಲ್ಲು ನಿವಾಸಿಗಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದರು. ಕಿನ್ನಿಮಜಲು ಸಮೀಪದ ತಿರುವಿನಲ್ಲಿ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ‘ಗೃಹಲಕ್ಷ್ಮಿ’ ಎಡವಟ್ಟು: ಮೃತಪಟ್ಟವರ ಖಾತೆಗೆ ಜಮೆಯಾಯ್ತು 22 ಕೋಟಿ ರೂಪಾಯಿ!
ರಿಕ್ಷಾದಲ್ಲಿ ಚಾಲಕ ಸೇರಿ ನಾಲ್ವರು ಪ್ರಯಾಣಿಕರಿದ್ದರು. ಘಟನೆಯ ತೀವ್ರತೆಗೆ ರಿಕ್ಷಾ ಹಾನಿಗೊಳಗಾಗಿದ್ದರೂ, ಒಳಗಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತಕ್ಷಣವೇ ಸ್ಥಳೀಯರು ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಮುಂಜಾನೆ ವೇಳೆಯಾದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


