ಬೆಚ್ಚಿಬೀಳಿಸುವ ಕೃತ್ಯ: ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ!

ದೆಹಲಿ: ದೇಶದ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತೆ ಪ್ರಶ್ನಾರ್ಹವಾಗಿದೆ. ದೆಹಲಿಯ ನಂಗ್ಲೋಯಿ ಎಂಬಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 11ರ ರಾತ್ರಿ ಈ ಘಟನೆ ಸಂಭವಿಸಿದೆ. ಸಂತ್ರಸ್ತ ಮಹಿಳೆ ರಾತ್ರಿ 11 ಗಂಟೆಯ ಸುಮಾರಿಗೆ ಕೆಲಸ ಮುಗಿಸಿ ರಾಣಿಬಾಗ್ ಪ್ರದೇಶದ ಸರಸ್ವತಿ ವಿಹಾರ್ ಬಸ್ ನಿಲ್ದಾಣದ ಹತ್ತಿರ ನಡೆದುಕೊಂಡು ಹೋಗುತ್ತಿದ್ದರು. ರಸ್ತೆ ಬದಿ ನಿಂತಿದ್ದ ಸ್ಲೀಪರ್ ಬಸ್ಸಿನ ಬಳಿ ಕಂಡಕ್ಟರ್‌ಗೆ ಸಮಯ ಕೇಳಲು ಹೋದಾಗ, ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ಯಲಾಗಿದೆ.

ಇದನ್ನೂ ಓದಿ: ಬಂಟ್ವಾಳದಲ್ಲಿ ಕಳ್ಳತನ: ಚಿನ್ನ, ನಗದು ಮತ್ತು ಬೆಳ್ಳಿ ಮೂರ್ತಿ ದೋಚಿ ಪರಾರಿ

ಬಸ್ಸು ಸುಮಾರು 7 ಕಿಲೋಮೀಟರ್‌ಗಳವರೆಗೆ ಚಲಿಸುತ್ತಿದ್ದಂತೆಯೇ ಚಾಲಕ ಮತ್ತು ಕಂಡಕ್ಟರ್ ಇಬ್ಬರೂ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿದ್ದಾರೆ. ತಡರಾತ್ರಿ 2 ಗಂಟೆಯ ಸುಮಾರಿಗೆ ಮಹಿಳೆಯನ್ನು ಬಸ್ಸಿನಿಂದ ಹೊರದಬ್ಬಲಾಗಿದ್ದು, ಪರಿಣಾಮವಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು