ದೆಹಲಿ: ಹಣದುಬ್ಬರದ ಬಿಸಿಯಲ್ಲಿ ಬೆಂದಿರುವ ಜನಸಾಮಾನ್ಯರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದು (ಶುಕ್ರವಾರ) ಬೆಳಗ್ಗಿನಿಂದಲೇ ಜಾರಿಗೆ ಬಂದಿವೆ.
ಇಂಧನ ದರಗಳು ಗಮನಾರ್ಹವಾಗಿ ಏರಿಕೆ ಕಂಡಿವೆ:
ಪೆಟ್ರೋಲ್: ಪ್ರತಿ ಲೀಟರ್‌ಗೆ 94.77 ರೂ. ಇದ್ದ ಬೆಲೆಯು ಈಗ 97.77 ರೂ. ಗೆ ಏರಿಕೆಯಾಗಿದೆ.
ಡೀಸೆಲ್: ಪ್ರತಿ ಲೀಟರ್‌ಗೆ 87.67 ರೂ. ಇದ್ದ ಬೆಲೆಯು ಈಗ 90.67 ರೂ. ಗೆ ತಲುಪಿದೆ.
ಇದನ್ನೂ ಓದಿ: ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ದರ 993 ರೂ. ಹೆಚ್ಚಳ
ಸ್ಥಳೀಯ ದರಗಳಲ್ಲಿ ವ್ಯತ್ಯಾಸ: ಕೇಂದ್ರ ಸರ್ಕಾರ ಘೋಷಿಸಿರುವ ಈ ಏರಿಕೆಯ ಜೊತೆಗೆ, ಆಯಾ ರಾಜ್ಯಗಳು ವಿಧಿಸುವ ವ್ಯಾಟ್ (VAT) ಮತ್ತು ಸ್ಥಳೀಯ ತೆರಿಗೆಗಳಿಗೆ ಅನುಗುಣವಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ದರ ಏರಿಕೆಯಲ್ಲಿ ತುಸು ವ್ಯತ್ಯಾಸವಿರಲಿದೆ. ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


