ಮಂಗಳೂರು: ಕರಾವಳಿಯಲ್ಲಿ ಡ್ರಗ್ಸ್ ಜಾಲದ ವಿರುದ್ಧ ಪೊಲೀಸರು ಸಮರ ಮುಂದುವರಿಸಿದ್ದು, ಮೇರಿ ಹಿಲ್ ಹೆಲಿಪ್ಯಾಡ್ ಮೈದಾನದ ಬಳಿ ಭಾರಿ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದ ಕುಖ್ಯಾತ ಪೆಡ್ಲರ್ ಒಬ್ಬನನ್ನು ಕಾವೂರು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲದ ಮುಕ್ಕಚ್ಚೇರಿ ಹಿಲರಿ ನಗರದ ನಿವಾಸಿ ಇರ್ಷಾದ್ ಅಲಿಯಾಸ್ ಇರ್ಷಾ (26) ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಹಳೆಯ ಅಪರಾಧಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇದನ್ನೂ ಓದಿ:Crime : ಪತ್ನಿಯನ್ನು ಹೂತ ಜಾಗದಲ್ಲೇ ನಾಯಿಯ ಶವವನ್ನು ಹೂತು ಯಾಮಾರಿಸಿದ ಪಾಪಿ ಪತಿ
ಆರೋಪಿಯು ಮೇರಿಹಿಲ್ ಹೆಲಿಪ್ಯಾಡ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪಣಂಬೂರು ಎಸಿಪಿ ಸ್ಕ್ವಾಡ್ ಮತ್ತು ಕಾವೂರು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಜಂಟಿ ಪೊಲೀಸ್ ತಂಡ ಸ್ಥಳದ ಮೇಲೆ ಧಾಳಿ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದೆ. ಬಂಧಿತನಿಂದ ಸುಮಾರು 1.56 ಲಕ್ಷ ರೂಪಾಯಿ ಮೌಲ್ಯದ 3.138 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


