ಬೆಂಗಳೂರು: ರಾಜ್ಯಾದ್ಯಂತ ಹವಾಮಾನ ವೈಪರೀತ್ಯ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ ಹಾಗೂ ಗುಡುಗು ಸಿಡಿಲಿನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನದ ಹಠಾತ್ ಬದಲಾವಣೆಯಿಂದಾಗಿ ರಾಜ್ಯದ ಜನತೆ ಜಾಗರೂಕರಾಗಿರಲು ಸೂಚಿಸಲಾಗಿದೆ.
ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ – ಆರೆಂಜ್ ಅಲರ್ಟ್:
ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ (Hailstorm) ಬೀಳುವ ಸಾಧ್ಯತೆ ದಟ್ಟವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿದೆ.
ಇದನ್ನೂ ಓದಿ :ಮಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಲ್ಯಾಂಡಿಂಗ್ ಆಗಲಾಗದೆ ವಿಟ್ಲದಲ್ಲಿ ಸುತ್ತು ಹೊಡೆಯುತ್ತಿರುವ ವಿಮಾನಗಳು!
ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ:
ಮಳೆ ಮತ್ತು ಆಲಿಕಲ್ಲು ಗಾಳಿಯ ಸಮಯದಲ್ಲಿ ಸಾರ್ವಜನಿಕರು ಮುಕ್ತ ಪ್ರದೇಶಗಳು, ಕೆರೆ-ನದಿ ತೀರಗಳು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಎಂದು ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ. ವಿಶೇಷವಾಗಿ ರೈತರು ಮತ್ತು ದನಕರು ಮೇಯಿಸುವವರು ಸಿಡಿಲಿನ ಆಘಾತದಿಂದ ರಕ್ಷಣೆ ಪಡೆದುಕೊಳ್ಳಲು ಸುರಕ್ಷಿತ ಕಟ್ಟಡಗಳಲ್ಲಿ ಇರಲು ಕಂದಾಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ವಾಹನ ಸವಾರರು ಜಾಗ್ರತೆಯಿಂದ ಸಂಚರಿಸಲು ಕೋರಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


