ವಿಜಯಪುರ: ಇಲ್ಲಿನ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ವಿವಿಧ ಯೋಜನೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ನೂತನ ಯೋಜನೆಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಯಿತು.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸ್ವಾತಂತ್ರ್ಯ ಸಂಗ್ರಾಮದ ಹೆಮ್ಮೆಯ ಮಹಿಳಾ ಹೋರಾಟಗಾರ್ತಿ, ಕನ್ನಡತಿ, ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಯಿತು ಎಂದರು.

ಇದನ್ನೂ ಓದಿ: ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿದ್ದರಾಮಯ್ಯ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂಬಿ ಪಾಟೀಲ್, ಎಚ್.ಸಿ ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ವಿವಿಧ ಮಠಗಳ ಮಠಾಧೀಶರುಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಸಂಗ್ರಾಮದ ಹೆಮ್ಮೆಯ ಮಹಿಳಾ ಹೋರಾಟಗಾರ್ತಿ, ಕನ್ನಡತಿ, ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಯಿತು.
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್, ಶ್ರೀ ಎಂಬಿ ಪಾಟೀಲ್, ಶ್ರೀ ಎಚ್.ಸಿ ಮಹದೇವಪ್ಪ, ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್… pic.twitter.com/YXKNoDbrkj
— Ramalinga Reddy (@RLR_BTM) January 11, 2026
ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ನೂತನ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ವಿವಿಧ ಮಠಗಳ ಮಠಾಧೀಶರು, ಕಿತ್ತೂರು ರಾಣಿ ಚನ್ನಮ್ಮನವರ ವಂಶಜರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ನಾಗರಿಕರು ಉಪಸ್ಥಿತರಿದ್ದು ಸಮಾರಂಭವನ್ನು ಯಶಸ್ವಿಗೊಳಿಸಿದರು ಎಂದು ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

