ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ!: 31 ರಂದು ಸಿಡಿಲು ಸಹಿತ ಭಾರೀ ಮಳೆ ಮುನ್ನೆಚ್ಚರಿಕೆ!

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ (ಮೇ 30) ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ವೀಕೆಂಡ್ ಆರಂಭದ ಹೊತ್ತಿನಲ್ಲೇ ವರುಣನ ಆರ್ಭಟ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೇ 30 ಮತ್ತು ಮೇ 31 ರಂದು ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ.

ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು ಮತ್ತು ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಲವಾದ ಬಿರುಗಾಳಿ ಸಹಿತ ಭಾರಿ ಪ್ರಮಾಣದ ಮಳೆಯಾಗುವ ದಟ್ಟ ಸಾಧ್ಯತೆಗಳಿವೆ. ಹಠಾತ್ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಮತ್ತು ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ:ಕರಾವಳಿ, ಒಳನಾಡಿಗೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದ ಐಎಂಡಿ!

ಧಾರಾಕಾರ ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಳೆ ಮತ್ತು ಗಾಳಿ ಇರುವ ಸಮಯದಲ್ಲಿ ಮರಗಳ ಕೆಳಗೆ ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಹವಾಮಾನದ ಏರುಪೇರಿನ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಗೆ ಸಜ್ಜಾಗಿರಲು ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು