ರಾಜ್ಯಸಭೆಗೆ ಸುಮಲತಾ ಅಂಬರೀಷ್ ಎಂಟ್ರಿ?: ಒಕ್ಕಲಿಗ ಸೀಟು ಮುನ್ನೆಲೆಗೆ ಬರುತ್ತಿದ್ದಂತೆ ಅಲರ್ಟ್ ಆದ ಬಿಜೆಪಿ ವರಿಷ್ಠರು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿದ್ದು, ಪ್ರತಿಪಕ್ಷ ಬಿಜೆಪಿ ಪಾಳೆಯದಲ್ಲಿ ಅಭ್ಯರ್ಥಿ ಆಯ್ಕೆಯ ಕಸರತ್ತು ತೀವ್ರಗೊಂಡಿದೆ. ಇದರ ನಡುವೆ, ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ (Sumalata Ambareesh) ಅವರ ಹೆಸರು ರಾಜ್ಯಸಭಾ ರೇಸ್‌ನಲ್ಲಿ ಮುಂಚೂಣಿಗೆ ಬಂದಿದ್ದು, ರಾಜಕೀಯ ಲೆಕ್ಕಾಚಾರಗಳನ್ನು ಬದಲಿಸಿದೆ.

ಹಲವು ದಿನಗಳ ಹಿಂದೆ ನಡೆದ ರಾಜ್ಯ ಬಿಜೆಪಿ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ (DV Sadanandagowda) ಹಾಗೂ ಮಾಜಿ ಶಾಸಕ ನಿರ್ಮಲ್‌ ಕುಮಾರ್ ಸುರಾನ ಅವರ ಹೆಸರುಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿ ದೆಹಲಿಯ ವರಿಷ್ಠರಿಗೆ ರವಾನಿಸಲಾಗಿತ್ತು. ಆದರೆ, ಈಗ ರಾಜ್ಯ ರಾಜಕಾರಣದಲ್ಲಿ ಆಗಿರುವ ದಿಢೀರ್ ಬೆಳವಣಿಗೆಗಳು ಹಳೆಯ ಪಟ್ಟಿಯನ್ನು ಸೈಡ್ ಲೈನ್ ಮಾಡುವಂತೆ ಮಾಡಿದೆ.

ಇದನ್ನೂ ಓದಿ: Political: ಅಬಕಾರಿ ಇಲಾಖೆಯಲ್ಲಿ ಬಹುಕೋಟಿ ಹಗರಣ: ಬಿಜೆಪಿ ಆರೋಪ

ಕಾಂಗ್ರೆಸ್‌ನಲ್ಲಿ ಡಿಕೆಶಿ ಹವಾ; ಬಿಜೆಪಿಯಿಂದ ಸುಮಲತಾ ಅಸ್ತ್ರ!:

ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗುತ್ತಿದ್ದು, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಗಾದಿ ಏರಲು ಸಂಪೂರ್ಣವಾಗಿ ಸಜ್ಜಾಗುತ್ತಿದ್ದಾರೆ. ಕಾಂಗ್ರೆಸ್‌ನ ಈ ಒಕ್ಕಲಿಗ ಕಾರ್ಡ್‌ಗೆ ಕೌಂಟರ್ ನೀಡಲು ಈಗ ಬಿಜೆಪಿ ಮುಂದಾಗಿದೆ. ಒಕ್ಕಲಿಗ ಸಮುದಾಯದ ಪ್ರಭಾವವಿರುವ ಮಂಡ್ಯ ಭಾಗದಲ್ಲಿ ಜನಪ್ರಿಯತೆ ಹೊಂದಿರುವ ಸುಮಲತಾ ಅಂಬರೀಷ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಖುದ್ದು ಬಿಜೆಪಿ ಹೈಕಮಾಂಡ್ ತೀವ್ರ ಆಸಕ್ತಿ ತೋರಿದೆ ಎಂದು ತಿಳಿದುಬಂದಿದೆ. ಆ ಮೂಲಕ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಹಿಡಿತವನ್ನು ಭದ್ರಪಡಿಸಿಕೊಳ್ಳಲು ವರಿಷ್ಠರು ಹೊಸ ಸ್ಕೆಚ್ ಹಾಕಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು