ಜೂನ್ 4 ರಿಂದ ಕೇರಳಕ್ಕೆ ಮಾನ್ಸೂನ್ ಎಂಟ್ರಿ; ಜೂನ್ 3 ರಿಂದಲೇ ಕರ್ನಾಟಕದಾದ್ಯಂತ ಭಾರಿ ಮಳೆ ಮುನ್ಸೂಚನೆ!

ಬೆಂಗಳೂರು: ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು (Southwest Monsoon) ಪ್ರವೇಶದ ದಿನಾಂಕದಲ್ಲಿ ಕೊನೆಕ್ಷಣದ ಬದಲಾವಣೆಯಾಗಿದೆ. ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಈ ಬಾರಿ ಮುಂಗಾರು ಪ್ರವೇಶ ತುಸು ವಿಳಂಬವಾಗಿದ್ದು, ಜೂನ್ 4 ರಿಂದ ಜೂನ್ 6 ರ ಅವಧಿಯಲ್ಲಿ ಅಧಿಕೃತವಾಗಿ ಕೇರಳ ಕರಾವಳಿಯನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂಗಾರು ಆರಂಭದ ಬೆನ್ನಲ್ಲೇ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಜನತೆಗೆ ಹವಾಮಾನ ಇಲಾಖೆ ಪ್ರಮುಖ ಅಲರ್ಟ್ ನೀಡಿದ್ದು, ಜೂನ್ 3 ರಿಂದಲೇ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಕೆಲವೆಡೆ ವ್ಯಾಪಕ ಮಳೆಯಾಗಿದೆ. ಜೂನ್ 3 ರಿಂದ ಈ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದ್ದು, ಇಡೀ ರಾಜ್ಯಾದ್ಯಂತ ವಿಸ್ತರಿಸಲಿದೆ.

ಇದನ್ನೂ ಓದಿ: ಮುಂಗಾರು ಪ್ರವೇಶ ದಿನಾಂಕ ಬದಲಾವಣೆ: ಜೂನ್ 4ಕ್ಕೆ ಕೇರಳ ಕರಾವಳಿಗೆ ಮಾನ್ಸೂನ್ ಎಂಟ್ರಿ; ಹವಾಮಾನ ಇಲಾಖೆ ಅಲರ್ಟ್!

ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶದ ಪರಿಣಾಮವಾಗಿ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಅತ್ಯಂತ ಉತ್ತಮ ಮಳೆಯಾಗಲಿದೆ. ಇದೇ ವೇಳೆ ಆಂಧ್ರಪ್ರದೇಶದ ಕರಾವಳಿ, ರಾಯಲಸೀಮಾ ಹಾಗೂ ಕರ್ನಾಟಕದ ಕರಾವಳಿ ತೀರ ಪ್ರದೇಶಗಳಲ್ಲಿ ತೀವ್ರ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು