ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಗೆ ಶುಭಕೋರಿದ ನಿತ್ಯಾನಂದ ಸ್ವಾಮೀಜಿ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ (Chief Minister of Karnataka) ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ನಿತ್ಯಾನಂದ ಪರಮಶಿವಂ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜ್ಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಜನತೆಯ ಕಲ್ಯಾಣಕ್ಕಾಗಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರಕ್ಕೆ ಯಶಸ್ಸು ಸಿಗಲಿ ಎಂದು ಅವರು ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಚ್ಚಿಕೊಂಡಿದ್ದಾರೆ.

ಇಲ್ಲಿದೆ ನೋಡಿ ಪೋಸ್ಟ್

ಡಿ.ಕೆ. ಶಿವಕುಮಾರ್ ಅವರ ರಾಜಕೀಯ ನಡೆ, ಸಂಘಟನಾ ಚಾತುರ್ಯ ಮತ್ತು ಕಠಿಣ ಪರಿಶ್ರಮವನ್ನು ಸ್ಮರಿಸಿದ್ದಾರೆ. ಕರ್ನಾಟಕದಂತಹ ಪ್ರಮುಖ ರಾಜ್ಯದ ನೇತೃತ್ವ ವಹಿಸಿಕೊಂಡಿರುವ ನೂತನ ಮುಖ್ಯಮಂತ್ರಿಗಳಿಗೆ ಪರಮಶಿವನ ಆಶೀರ್ವಾದ ಸದಾ ಇರಲಿ ಎಂದು ಆಶಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಅಧಿಕಾರಾವಧಿಯಲ್ಲಿ ರಾಜ್ಯವು ಪ್ರಗತಿಯ ಪಥದಲ್ಲಿ ಸಾಗಲಿ ಮತ್ತು ಧಾರ್ಮಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ;, ಡಿ.ಕೆ.ಶಿ ಪೋಸ್ಟ್

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ದೇಶ-ವಿದೇಶಗಳ ಪ್ರಮುಖ ಗಣ್ಯರು, ಧಾರ್ಮಿಕ ಮುಖಂಡರು ಅಭಿನಂದನೆಗಳ ಮಹಾಪೂರವನ್ನೇ ಹರಿಸುತ್ತಿದ್ದು, ಸದ್ಯ ಶ್ರೀ ನಿತ್ಯಾನಂದ ಪರಮಶಿವಂ ಅವರ ಈ ಅಭಿನಂದನಾ ಸಂದೇಶವು ರಾಜಕೀಯ ಮತ್ತು ಧಾರ್ಮಿಕ ವಲಯದಲ್ಲಿ ಭಾರಿ ಗಮನ ಸೆಳೆದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು