ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ ಹಾಗೂ ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (46) ಅವರು ಇಂದು ಹೃದಯಾಘಾತದಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದ ಚಂದನವನ ಮತ್ತು ಅವರ ಅಭಿಮಾನಿ ಬಳಗ ತೀವ್ರ ಶೋಕಕ್ಕೊಳಗಾಗಿದೆ.

ಮನೆಯಲ್ಲಿದ್ದ ಸಂದರ್ಭದಲ್ಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಿಲನ’ ಚಿತ್ರದಲ್ಲಿನ ನಟನೆಗಾಗಿ ಹೆಚ್ಚು ಗುರುತಿಸಿಕೊಂಡಿದ್ದ ಅವರು, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಕಿರುತೆರೆಯ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಮನೆಮಾತಾಗಿದ್ದರು.

ಇದನ್ನೂ ಓದಿ: ಭಾರತದ ಸಿನಿ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ

ನಟನೆ ಮಾತ್ರವಲ್ಲದೆ, ಪತ್ನಿಯೊಂದಿಗೆ ಸೇರಿ ‘ಪಾರು’ ಮತ್ತು ‘ನಾ ನಿನ್ನ ಬಿಡಲಾರೆ’ ಅಂತಹ ಸೂಪರ್ ಹಿಟ್ ಧಾರಾವಾಹಿಗಳನ್ನು ನಿರ್ಮಿಸುವ ಮೂಲಕ ಯಶಸ್ವಿ ನಿರ್ಮಾಪಕರಾಗಿ ಹೊರಹೊಮ್ಮಿದ್ದರು.ದಿಲೀಪ್ ರಾಜ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಕಿರುತೆರೆಯ ಕಲಾವಿದರು ಕಂಬನಿ ಮಿಡಿದಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು