ನವದೆಹಲಿ: ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ಹೊರಗೆ ತಳ್ಳಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಘಟನೆ ನಡೆದಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಅಮ್ಮದ್ ಅಲಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: T20 Worldcup: ರೊಮಾರೊಯೀ ಶಫರ್ಡ್ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್
ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಕತ್ತಾ ಮೂಲದ ಯುವತಿ ಅಮ್ಮದ್ ಅಲಿಯನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ ಸ್ನೇಹಿತನ ಸಹಾಯದಿಂದ ಆಕೆಯನ್ನು ಕಾರಿನಿಂದ ಹೊರಗೆಸೆದಿದ್ದಾನೆ ಎಂದು ವರದಿ ತಿಳಿಸಿದೆ.
ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಮದ್ ನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು.
ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯುವತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

